ಕೆಲವು ಶ್ವಾನಗಳ ಸಾಕುವಿಕೆ ನಿಷೇಧ ಆದೇಶ: ಹೈ ಕೋರ್ಟ್ ತಡೆ

ಬೆಂಗಳೂರು : ಕೇಂದ್ರ ಸರ್ಕಾರ ಕೆಲವು ಶ್ವಾನಗಳ ಸಾಕುವಿಕೆಯನ್ನು ನಿಷೇಧಿಸಿದೆ. ಶ್ವಾನ ತಳಿಗಳ ನಿಷೇಧ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.23 ಭೀಷಣ ಶ್ವಾನ ತಳಿಗಳ ಸಾಕುವಿಕೆಗೆ ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

ಕೇಂದ್ರ ಸರ್ಕಾರ ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿತ್ತು. ಇದನ್ನು ಆಕ್ಷೇಪಿಸಿ ಶ್ವಾನ ಹ್ಯಾಂಡ್ಲ‌ರ್ & ರಾಟ್‌ವೈಲ‌ರ್ ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಜ್ಞರು ನಿಷೇಧಿಸುವ ಸಂಬಂಧ ಯಾರನ್ನೂ ಸಂಪರ್ಕಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು.ನ್ಯಾ. ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಅರ್ಜಿಯನ್ನು ಪುರಸ್ಕರಿಸಿ ಕೇಂದ್ರದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆ ಕರ್ನಾಟಕಕ್ಕೆ ಮಾತ್ರ ಅನ್ವಯಿಸುತ್ತೆ. ಯಾವ ಆಧಾರದ ಮೇಲೆ ಈ ರೀತಿ ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟ ಪಡಿಸಬೇಕು. ಎ.ಎಸ್.ಜಿ ಸ್ಪಷ್ಟನೆಯ ವರದಿ ನೀಡುವ ತನಕ ಈ ತಡೆ ಇರಲಿದೆ ಎಂದು ಹೈಕೋರ್ಟ್ ಹೇಳಿದೆ.

ಇಂತಹ ಶ್ವಾನ ಸಾಕಿದವರು ಅವುಗಳ ಸಂತಾನಶಕ್ತಿ ತಡೆಯಬೇಕು. ಸಂತಾನಶಕ್ತಿ ಹರಣ ಮಾಡುವ ಮೂಲಕ ಆ ತಳಿಗಳ ಅಭಿವೃದ್ಧಿಗೆ ತಡೆಯಬೇಕು ಎಂದು ಕೇಂದ್ರ ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಶ್ವಾನಗಳು ಅಪಾಯಕಾರಿ ಎಂದು ಸಮಿತಿಯೂ ಮನಗಂಡಿರುವಂತಿದೆ. ಈ ಆದೇಶ ಈ ಶ್ವಾನಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top