ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಏ.12 ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.
ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಕೆಎಸ್ ಈಶ್ವರಪ್ಪ ಅವರು ಹೇಳಿಕೊಂಡತೆ “ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣ ವಿರೋಧಿಸಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ನಾನು ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ
