ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ ನಿರೂಪಿಸಿ ಸ್ವಾತಂತ್ರ್ಯಪೂರ್ವ ಕಾಲಘಟ್ಟದ ಪ್ರಭುತ್ವ ವ್ಯವಸ್ಥೆ , ಸಮಾಜ ಹಾಗೂ ಪ್ರಸ್ತುತ ಕಾಲಮಾನದ ಪ್ರಭುತ್ವ ಮತ್ತು ಸಮಾಜ , ಯುವಜನತೆ ಮನಸ್ಥಿತಿಗಳ ಕುರಿತು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ಪಿ ಅಧ್ಯಕ್ಷತೆ ವಹಿಸಿದ್ದರು. ಏಕ್ಯುಎಸಿ ಸಂಚಾಲಕ ಸ್ವಾಮಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶಾಂತಿ.ಕೆ, ಉಪನ್ಯಾಸಕಿ ಹರಿಣಾಕ್ಷಿ ಉಪಸ್ಥಿತರಿದ್ದರು
ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಾದ ಕಿರಣ್ ಸ್ವಾಗತಿಸಿ, ಹೇಮಂತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು ಪಾಲ್ಗೊಂಡಿದ್ದರು.