ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರೋಟರಿ ಪುರದಲ್ಲಿ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.
ಲೋಕಸಭಾ ಚುನಾವಣೆಯ ಸಂಬಂಧ ಮನೆಮನೆಗೆ ಮತ ಚೀಟಿ ವಿತರಣೆಗೆ ಚುನಾವಣಾಧಿಕಾರಿಯವರ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆಯರು ತೆರಳುವ ಕಾರ್ಯ ಇಂದಿನಿಂದ ಆರಂಭಗೊಂಡಿದ್ದು, ಈ ಸಂದರ್ಭ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತ ಚೀಟಿ ವಿತರಣೆ ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಇನ್ನೊಂದು ಮನೆಯಿಂದ ಹೊರ ಬಂದ ಮಹಿಳೆ ಅಂಗನವಾಡಿ ಕಾರ್ಯಕರ್ತೆಯೊಂದಿಗೆ ಮಾತನಾಡುತ್ತಿದ್ದ ವೇಳೆ ಆಕೆಯ ಮಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.