ಏ.17 ಮುಂಜಾನೆಯಿಂದ ಪುತ್ತೂರಿನಲ್ಲಿ ಮದ್ಯದಂಗಡಿ ಬಂದ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17 ಬೆಳಿಗ್ಗೆ 6 ರಿಂದ ಏ.18 ರ ಮಧ್ಯರಾತ್ರಿ ವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ತಿಳಿಸಿದ್ದಾರೆ.

ಪುತ್ತೂರು ಜಾತ್ರೋತ್ಸವ ಹಿನ್ನೆಲೆ ಸಾವಿರಾರು ಜನರು ಸೇರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಕಿಡಿಗೇಡಿಗಳಿಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top