ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಮೃತಪಟ್ಟ ಮಹಿಳೆ

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರ ಎಂಬಲ್ಲಿ ಎ.16ರಂದು ನಡೆದಿದೆ.

ಚಡಗರ ಅಗ್ರಹಾರ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧ(83) ಮೃತ ಮಹಿಳೆ.

ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಅದರಂತೆ ಪಿ.ಯಶೋಧ ಮನೆಯಲ್ಲೆ ಮತದಾನ ಮಾಡಿದ್ದರು. ಮತದಾನದ ದಿನ ಪಿ.ಯಶೋಧ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರೂ ಮತದಾನ ಮಾಡಿದ ತಕ್ಷಣ ಆಸ್ಪತ್ರೆಗೆ ತೆರಳಲು ನಿರ್ಧರಿಸಿದ್ದರು. ಹಾಗೆ ಮನೆಯಲ್ಲಿ ಮತದಾನ ಮಾಡಿದ ಅವರನ್ನು ಬಳಿಕ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತೀವ್ರವಾಗಿ ಅಸ್ವಸ್ಥಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top