ಪುತ್ತೂರು: ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್. ಹೇಳಿದರು.
ಅವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಹವ್ಯಾಸಿ ಪತ್ರಿಕೊದ್ಯಮದಲ್ಲಿ ತೊಡಗಿಸಿಕೊಂಡರೆ ಮುಂದೆ ಉದ್ಯೋಗದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಉಪಯೋಗವಾಗುತ್ತದೆ. ಅಲ್ಲದೇ ಹವ್ಯಾಸಿ ಪತ್ರಿಕೋದ್ಯಮದಿಂದ ಸಣ್ಣ ಪುಟ್ಟ ಆದಾಯವನ್ನು ಪಡೆದು ವಿದ್ಯಾಭ್ಯಾಸವನ್ನು ಅಡೆತಡೆಯಿಲ್ಲದೆ ಮುಂದುವರೆಸಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಶ್ರೀ ಪಿ.ಕೆ ಉಪಸ್ಥಿತರಿದ್ದರು. ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಭಟ್ ಸ್ವಾಗತಿಸಿ, ದೀಪ್ತಿ ಅಡ್ಡಂತಡ್ಕ ಕಾರ್ಯಕ್ರಮ ನಿರ್ವಹಿಸಿದರು.