ಲೋಕಸಭೆ ಚುನಾವಣೆ | ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಹ ಅಧ್ಯಕ್ಷರಾಗಿ ಶಕುಂತಳಾ ಟಿ. ಶೆಟ್ಟಿ, ಸಂಯೋಜಕರಾಗಿ ಎನ್‍.ಚಂದ್ರಹಾಸ ಶೆಟ್ಟಿ

ಪುತ್ತೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ- ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಈ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ನೂತನ ಪದಾಧಿಕಾರಿಗಳಿಗೆ  ಜವಾಬ್ದಾರಿಯನ್ನು ನೀಡಲಾಗಿದೆ. ನೂತನ 10 ಜನ ಸಹ-ಅಧ್ಯಕ್ಷರುಗಳು, 9 ಮುಖ್ಯ ಸಂಯೋಜಕರು, 38 ಸಂಯೋಜಕರು ಹಾಗೂ ಸಂವಹನ ಮತ್ತು ಸಾಮಾಜಿಕ ಜಾಲತಾಣಕ್ಕೆ 2, ಮಾಧ್ಯಮ ಸಂಯೋಜಕರನ್ನಾಗಿ 2 ಹಾಗೂ 36 ಜಿಲ್ಲಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆಯವರು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top