ಮಂಗಳೂರು: ದ್ವಿಚಕ್ರ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹೇರೂರು ನಿವಾಸಿ ಕೃಷ್ಣ ಗಾಣಿಗ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಪರಿವರ್ತಿಸಲಾಗಿತ್ತು. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಅವರ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರಸಭೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.