ಬೆಳ್ತಂಗಡಿ : ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ| ಆದಂ ಉಸ್ಮಾನ್ (65) ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಪುತ್ತೂರು, ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.
ಮೃತದೇಹ ತಮ್ಮ ಮನೆಯಾದ ಕೆ.ಸಿ.ರೋಡ್ ಮಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
























