ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವಕ್ಕೆ ಶನಿವಾರ ಸಂಜೆ ಹೊರೆ ಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಯಿತು.
ಶನಿವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರೆಕಾಣಿಕೆ ಮೆರವಣಿಗೆ ಶ್ರೀ ದೇವಸ್ಥಾನದಕ್ಕೆ ತೆರಳಿತು.
ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ತೆಂಗಿಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಸಂಚಾಲಕ ಸುಧಾಕರ ರಾವ್ ಆರ್ಯಾಪು, ಕಾರ್ಯಾಧ್ಯಕ್ಷ ಕೆ.ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ದೇವಸ್ಯ, ಕಾರ್ಯದರ್ಶಿಗಳಾದ ಗಿರೀಶ್ ಕಿನ್ನಿಜಾಲು, ಧನುಷ್ ಹೊಸಮನೆ, ಕೋಶಾಧಿಕಾರಿ ವಿಜಯ ಬಿ.ಎಸ್. ಸಂಪ್ಯ,, ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ಭಾನುವಾರ ಬೆಳಗ್ಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.