ಪುತ್ತೂರು: 1964 ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದು, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏ.23 ಹಾಗೂ 24 ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 23 ರಂದು ಸಂಜೆ 7 ಗಂಟೆಯಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ನವಕ ಕಲಶ ಪೂಜೆ, ಅನ್ನಂತರ್ಪಣೆ ನಡೆಯಲಿದೆ. ಸಂಜೆ 4.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಾಲಿವಧೆ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಏ.24 ರಂದು ಬೆಳಗ್ಗೆ ಗಣಹೋಮ ನಡೆಯಲಿದ್ದುö, 7.30ಕ್ಕೆ ಶ್ರೀರಾಮ ದೇವರ ಪ್ರತಿಷ್ಠೆ ನಡೆಯಲಿದೆ. ಬಳಿಕ ಸಾನಿಧ್ಯ ಕಲಶಾಭಿಷೇಕ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಈ ನಡುವೆ ಭಜನಾ ಕಾರ್ಯಕ್ರಮ ನಡೆಯಲಿದ್ದುö, ಮಧ್ಯಾಹ್ನ 11 ಗಂಟೆಯಿಂದ ಧಾರ್ಮಿಕ ಸಭೆ ನಡೆಯಲಿದೆ. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ರಾಘವೇಂದ್ರ ಮಠದ ಆಡಳಿತ ಮುಖ್ಯಸ್ಥರಾದ ಯು. ಪೂವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಕೆಮ್ಮಿಂಜೆ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ವೇ.ಮೂ. ಸುಬ್ರಹ್ಮಣ್ಯ ಬಳ್ಳುಕ್ಕುರಾಯ, ಬಲರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿರುತ್ತಾರೆ. ವಾಸ್ತು ಶಿಲ್ಪಿ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಸನ್ಮಾನಿಸಲಾಗುತ್ತದೆ. ದಕ್ಷಿಣ ಪ್ರಾಂತ ರಾಷ್ಟç ಸೇವಿಕಾ ಸಮಿತಿಯ ಭಗಿನಿ ಮೀನಾಕ್ಷಿö, ಉದ್ಯಮಿಗಳಾದ ಉಜ್ವಲ್ ಪ್ರಭು, ಶಿವಪ್ರಸಾದ್ ಶೆಟ್ಟಿö ಗೌರವ ಉಪಸ್ಥತರಿರುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಅರುಣ್ ಕುಮಾರ್ ಆಲಂಕಾರ್, ನವೀಕರಣ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಪುನರ್ವಸು, ಕಾರ್ಯದರ್ಶಿ ನಿತಿನ್ ಕುಮಾರ್ ಮಂಗಳ, ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಕೆಮ್ಮಿಂಜೆ,ಕಿರಣ್ ಕುಮಾರ್, ಯುವ ವೃoದ ಅಧ್ಯಕ್ಷ ಅನಿಶ್ ಕುಮಾರ್ ಮರೀಲು ಉಪಸ್ಥಿತರಿದ್ದರು.