ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆರ್ಟಿ ಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಸೈಬರ್ ಸೆಕ್ಯೂರಿಟಿ ಕುರಿತು ವಿದ್ಯಾರ್ಥಿಗಳಿಗೆ ಎರಡು ದಿನದ ಕಾರ್ಯಾಗಾರ ನಡೆಯಿತು.
ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳಿಗೆ ನಿಯೋ ಇನ್ನೊವೇಶನ್ಸ್ & ಸ್ಕಿಲ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್ ಕುರಿತಾಗಿ 23 ವರ್ಷಗಳ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್ ನಲ್ಲಿಅನುಭವ ಹೊಂದಿರುವ ಅಲೋಕ್ ಚಕ್ರವರ್ತಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ಬಿಗ್ ಡಾಟಾ, ಹಾಡೂಪ್, ಸ್ಟ್ರಕ್ಚರ್ ಕ್ವೆರಿ ಲ್ಯಾಗ್ವೇಜ್, ಆರ್ ಡಿಬಿಎಮ್ ಎಸ್ ಮುಂತಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ 60 ವಿದ್ಯಾರ್ಥಿಗಳು, ಬಿ.ಸಿ.ಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.