ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ – ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಮಂಗಳೂರು : ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ   ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಬುಧವಾರ ಸಂಜೆ 6ರ ಬಳಿಕ ರ‍್ಯಾಲಿ–ಬೀದಿ ಪ್ರಚಾರಕ್ಕೆ ಅವಕಾಶ ಇಲ್ಲ. ಮನೆ ಮನೆಗೆ ಹೋಗಿ ಪ್ರಚಾರ ಮಾಡಬಹುದು. ಈ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು ಕಡ್ಡಾಯವಾಗಿ ಕ್ಷೇತ್ರವನ್ನು ತೊರೆಯಬೇಕು. ಈ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಖಾಸಗಿ ಕಾರ್ಯಕ್ರಮಗಳನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿದರೆ ಕ್ರಮವಹಿಸಲಿದ್ದೇವೆ ಎಂದರು.

ಕ್ಷೇತ್ರದಲ್ಲಿ 1005 ಸ್ಥಳಗಳಲ್ಲಿ 1876 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವೆಬ್‌ಕಾಸ್ಟಿಂಗ್ 938 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ಸೌಲಭ್ಯ ಇದೆ. 50 ಕಡೆ ಇರುವ 132 ಮತಗಟ್ಟೆಗಳಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ ಸಿಬ್ಬಂದಿ ಹಾಗೂ 200 ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. ಇವುಗಳಲ್ಲಿ ಅತಿಸೂಕ್ಷ್ಮ ಎಂದು ಗುರುತಿಸಲಾದ 171 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ಸೌಲಭ್ಯ ಹಾಗೂ ಸೂಕ್ಷ್ಮ ವೀಕ್ಷಕರು ಇರಲಿದ್ದಾರೆ ಎಂದು ವಿವರಿಸಿದರು.



































 
 

ಈ ಸಲ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡವರಲ್ಲಿ ಶೇ 70 ರಷ್ಟು ಸಿಬ್ಬಂದಿ ಮಹಿಳೆಯರು ಉದ್ಯೋಗ ನಿರ್ವಹಿಸುವ ವಿಧಾನ ಸಭಾ ಕ್ಷೇತ್ರಗಳಲ್ಲೇ ಚುನಾವಣಾ ಕರ್ತವ್ಯ ವಹಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ವಾಸ್ತವ್ಯಕ್ಕೆ, ಪ್ರಥಮ ಚಿಕಿತ್ಸೆಗೆ ಹಾಗೂ ಊಟೋಪಚಾರಕ್ಕೂ  ವ್ಯವಸ್ಥೆ ಕಲ್ಪಿಸಲು ಮತಗಟ್ಟೆ ಸಿಬ್ಬಂದಿ ಕಲ್ಯಾಣಾಧಿಕಾರಿಯನ್ನು ನಿಯೋಜಿಸಿದ್ದೇವೆ ಎಂದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top