ಲೋಕಸಭೆ ಚುನಾವಣೆ : ಏ.24-26 ರ ವರೆಗೆ ಮದ್ಯದಂಗಡಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.24. ಸಂಜೆ 6 ಗಂಟೆಯಿಂದ 26ರ ವರೆಗೆ ಮದ್ಯಪಾನ ನಿಷೇಧ ಘೋಷಣೆ ಮಾಡಲಾಗಿದೆ.

ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

ಈ ದಿನಗಳಂದು ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಗಿ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ ಮಾರಾಟವನ್ನು ನಿಷೇಧಿಸಲಾಗಿದೆ. ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆ ಮಾಡಲು ನಿಷೇಧವಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 
 



























Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top