ಸುಳ್ಯ: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆ ಎಸ್ ಆರ್ ಟಿ ಸಿ ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮತಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಕಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಎ. 25 ,26 ,27ರಂದು ಗ್ರಾಮಾಂತರ ಪ್ರದೇಶಗಳಿಗೆ ಬಸ್ಸು ಸಂಚಾರ ವ್ಯತ್ಯಯವಾಗಲಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕಾಗಿದೆ.