ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮತದಾನ ಜಾಗೃತಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು.

ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಂಸಾರ ಜೋಡು ಮಾರ್ಗ ನಿರ್ದೇಶಕ ಹಾಗೂ ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಬೀದಿನಾಟಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು. ಬೀದಿನಾಟಕದ ಮೂಲಕ ವಿದ್ಯಾರ್ಥಿಗಳು ಪ್ರಜಾ ಪ್ರಭುತ್ವದ ಮಹತ್ವದ ಬಗ್ಗೆ, ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು, ಮತದಾನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು, ಸಮಾಜಕ್ಕೆ ಮತದಾನದ ಬಗ್ಗೆ ಅರಿವು ಮೂಡಿಸಲು ಮತ್ತು ಯಾವುದೇ ಆಮಿಷಗಳಿಗೆ ಒಳಗಾಗದೆ ಧೈರ್ಯ ಮತ್ತು ಸ್ವಾಭಿಮಾನದಿಂದ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕರೆ ನೀಡಿದರು. 

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸ್ವೀಪ್ ಸಮಿತಿ ಪದಾಧಿಕಾರಿಗಳಾದ ಭರತ್ ರಾಜ್, ತುಳಸಿ, ಬಿಬಿಎ ವಿಭಾಗದ ಮುಖ್ಯಸ್ಥ ಡಾ.ರಾಧಾಕೃಷ್ಣ ಗೌಡ, ಸಂಸಾರ ಜೋಡು ಬೀದಿ ನಾಟಕ ಕಲಾವಿದರು, ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿಭಾಗದ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 



























ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಮತ್ತು ಸ್ನಾತಕೋತ್ತರ ಎಂ.ಎಸ್.ಸಿ ಭೌತಶಾಸ್ತ್ರ ವಿಭಾಗದ ಸಂಯೋಜಕ ವಿಪಿನ್ ನಾಯ್ಕ್ ಕಾರ್ಯಕ್ರಮ ಸಂಯೋಜಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top