ಬೆಂಗಳೂರು : ಏ. 26ರಂದು 14 ಲೋಕಸಭಾ ವ್ಯಾಪ್ತಿಯಲ್ಲೂ ಸರ್ಕಾರಿ ಕಚೇರಿಗೆ ಕಡ್ಡಾಯ ರಜೆ ಇರಲಿದೆ. ಖಾಸಗಿ ಕಂಪನಿಗಳು ರಜೆ ನೀಡಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ.
ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಅಂಚೆ ಮತದಾನಕ್ಕೆ ವಿವಿಧ ಇಲಾಖೆಯಿಂದ 1342 ಸಿಬ್ಬಂದಿ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಕೇವಲ 426 ಮಂದಿಯಿಂದ ಮಾತ್ರ ಅಂಚೆ ಮತದಾನ ಮಾಡಲಾಗಿದೆ.
ಏ.26 ರಂದು ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.