ಶೃಂಗೇರಿ : ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.