ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಶ್ರೀ ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿಜಿಯವರು ದ್ವೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮಿಜಿ ದಿವ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ದೇವಿಶ್ರೀ ಪುತ್ತೂರು, ಶಿವಪ್ರಸಾದ್ ಉಗ್ರಾಣಿ ಮನೆ, ಸದಾನಂದ ಮಾವಜಿ, ಸುಳ್ಯ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ನಾಯಕ್, ನ್ಯಾಯವಾದಿ ಎ. ಎನ್. ಅಶೋಕ್ ಕುಮಾರ್, ನೆಲ್ಲಿತಟ್ಟು ಶ್ರೀ ಮಹಾವಿಷ್ಣು ದೇವಸ್ಥಾನದ ಪೂರ್ಣ ಚಂದ್ರ ಕಣೆಮರಡ್ಕ, ರಾಮಚಂದ್ರ ಮಾಸ್ತರ್ ಕಣೆಮರಡ್ಕ, ಸುರೇಶ್ ಕಣೆಮರಡ್ಕ ಪಾಲ್ಗೊಂಡಿದ್ದರು.