ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಟಾರ್ಜ್ ಆಗಿದ್ದರು.
ಇದೀಗ ಇಂದು (ಏಪ್ರಿಲ್ 29) ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಎಸ್ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.