ಮೇ 1-2 : ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ತಾಲೂಕಿನ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮೇ 1 ಹಾಗೂ 2 ರಂದು ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜಾತ್ರೋತ್ಸವದ ಅಂಗವಾಗಿ ಮೇ 1 ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ  9 ಕ್ಕೆ ಗಣಪತಿ ಹೋಮ, ಮಧ್ಯಾಹ್ನ 12.30 ಕ್ಕೆ ವಿಶೇಷ ಪೂಜೆ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30 ಕ್ಕೆ ಮಹಾಪೂಜೆ, ರಾತ್ರಿ 7 ರಿಂದ ಶ್ರೀ ಭೂತ ಬಲಿ ಉತ್ಸವ, ವಸಂತ ಪೂಜೆ, ಪಲ್ಲಕ್ಕಿ ಉತ್ಸವ, ಅಶ್ವತ್ಥ ಕಟ್ಟೆ ಪೂಜೆ ನಡೆದು ಬಳಿಕ ಕುಂಜೂರು ಬೆಡಿ ನಡೆಯಲಿದೆ. ರಾತ್ರಿ 9 ರಿಂದ ಅನ್ನಸಂತರ್ಪಣೆ ನಡೆಯಲಿದೆ.

ಮೇ 2 ರಂದು ಬೆಳಿಗ್ಗೆ 8.30 ಕ್ಕೆ ಗಣಪತಿ ಹೋಮ, ಬೆಳಿಗ್ಗೆ 9ರಿಂದ ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ. ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ರಿಂದ ರಂಗಪೂಜೆ ಮತ್ತು ದೈವಗಳಿಗೆ ತಂಬಿಲ, ಭಂಡಾರ ತೆಗೆಯುವುದು ನಂತರ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8.30 ಕ್ಕೆ ‘ವ್ಯಾಘ್ರ ಚಾಮುಂಡಿ’ ದೈವದ ನೇಮೋತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಕುಂಜೂರು ಆಡಳಿತಾಧಿಕಾರಿ ರಾಮಣ್ಣ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top