ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದ ಮಗಳನ್ನು ತಾಯಿಯೇ ಕೊಲೆ ಮಾಡಿದ ಘಟನೆ ಬೆಂಗಳೂರು ಬನಶಂಕರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಹಿತಿ (18) ಮೃತಪಟ್ಟ ಯುವತಿ.
ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಸೆಕಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಪರೀಕ್ಷೆಗೆ ಕಾಲೇಜಿಗೆ ಹೋಗ್ತಿನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ ತಾಯಿಗೆ ತಿಳಿದಿದ್ದು, ಜಗಳ ಶುರು ಆಗಿತ್ತು ಜಗಳ ಅತಿರೇಕಕ್ಕೆ ಹೋದಾಗ ಚಾಕುವಿನಿಂದ ಇಬ್ಬರು ಪರಸ್ಪರ ಇರಿದುಕೊಂಡಿದ್ದಾರೆ. ತೀವ್ರವಾಗಿ ರಕ್ತಸ್ರಾವ ಆಗಿದ್ದರಿಂದ 18 ವರ್ಷದ ಮಗಳು ಸಾಹಿತಿ ಸಾವನ್ನಪ್ಪಿದ್ದಾಳೆ. ತಾಯಿ ಕೂಡ ತೀವ್ರ ರಕ್ತಸಾವ್ರದಿಂದ ಅಸ್ಪತ್ರೆ ಸೇರಿದ್ದಾರೆ