ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಇಂದು ಗಣಪತಿ ಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ

ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ, ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ.

ದೈವಸ್ಥಾನದಲ್ಲಿ ಇಂದು ಬೆಳಿಗ್ಗೆ 7.30ರಿಂದ ಗಣಹೋಮ, ನವಕ ಕಲಶ, ಬೆಳಿಗ್ಗೆ11ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ನಡೆದಿದೆ. ಮಧ್ಯಾಹ್ನ ಮಹಾಪೂಜೆ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ. ರಾತ್ರಿ 11 ರಿಂದ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

ರಾತ್ರಿ 8 ರಿಂದ ಅಭ್ಯುದಯ ಯುವಕ ಮಂಡಲ ಚೆನ್ನಾವರ, ಯುವಶಕ್ತಿ ಫ್ರೆಂಡ್ಸ್ ಚೆನ್ನಾವರ-ಮಾಡಾವು ಫ್ರೆಂಡ್ಸ್ ಇದರ ಆಶ್ರಯದಲ್ಲಿ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದೊಂದಿಗೆ ಕಾಪು ರಂಗತರಂಗ ಕಲಾವಿದರ ನೂತನ ನಾಟಕ ಒರಿಯೆ ತುಳು ನಾಟಕ ಪ್ರದರ್ಶನ ನಡೆಯಲಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top