ಕಲ್ಲು ಕೋರೆಯಿಂದ ಜಲ್ಲಿ ಸಾಗಾಟ : ಸ್ಥಳೀಯರಿಂದ ತಡೆ

ಮರ್ಕಂಜ :  ಮರ್ಕಂಜದ ಅಳವುಪಾರೆ ಕಲ್ಲುಕೋರೆಯಿಂದ ಜಲ್ಲಿ ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಸೇರಿ ಜಲ್ಲಿ ಸಾಗಾಟ ಮಾಡುತ್ತಿದ್ದ ಲಾರಿಗೆ ತಡೆಯೊಡ್ಡಿದ ಘಟನೆ ವರದಿಯಾಗಿದೆ.

ಅಳವುಪಾರೆ ಗಣಿಗಾರಿಕೆಯಿಂದ ಸ್ಥಳೀಯ ನಿವಾಸಿಗಳು ತೊಂದರೆಗೆ ಈಡಾಗುತ್ತಿದ್ದಾರೆಂದು ಕೆಲ ದಿನಗಳ ಹಿಂದೆ ಸುಳ್ಯ ತಹಶೀಲ್ದಾರ್ ರವರಿಗೆ ಮನವಿ ನೀಡಿದ್ದರು. ಇದಕ್ಕೆ ಸ್ಪಂದಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ತಡೆ ನೀಡಿದ್ದರು.

ಇದೀಗ ಅಳವುಪಾರೆ ಗಣಿಗಾರಿಕೆಯಲ್ಲಿ ಸ್ಟಾಕ್ ಆಗಿದ್ದ ಜಲ್ಲಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯರು ಆಕ್ಷೇಪಿಸಿ ಲಾರಿಗೆ ತಡೆ ಮಾಡಿದ್ದಾರೆ. ಸ್ಥಳಕ್ಕೆ ಪೋಲೀಸರು ಆಗಮಿಸಿರುವುದಾಗಿ ತಿಳಿದು ಬಂದಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top