ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.
ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111″ ಇರುವುದಾಗಿ, ಏರ್ ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ.
ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆನ್ನಲಾಗಿದೆ. ಬಾಂಬ್ ಬೆದರಿಕೆ ವಿಷಯ ಗೌಪ್ಯವಾಗಿಟ್ಟ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.