ಉಪ್ಪಿನಂಗಡಿ : ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ನಿನ್ನಿಕಲ್ಲಿನಲ್ಲಿ ನಡೆದಿದೆ.
ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27) ಮೃತಪಟ್ಟವರು.
ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಜನಾರ್ದನ ಅವರು ದುರ್ಗಾಗಿರಿ ಶ್ರೀ ದುರ್ಗಾ ಭಜನ ಮಂಡಳಿ ಹಾಗೂ ಶ್ರೀ ದುರ್ಗಾ ಯುವಕ ಮಂಡಲದ ಸಕ್ರಿಯ ಸದಸ್ಯರಾಗಿದ್ದರು. ಮೃತರು ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.