ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ‘ಧನ್ಯೋತ್ಸವ’ ಸಭೆ ಮೇ 5 ಭಾನುವಾರ ಸಂಜೆ 5 ಗಂಟೆಗೆ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ.

ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ.

ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top