ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ.
ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.
ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ರಾಗಾ ವಿರುದ್ಧ ‘ಗೋ ಬ್ಯಾಕ್’ ಘೋಷಣೆ ಕೂಗಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಹುಲ್ ಗಾಂಧಿ ವಾಪಸ್ ಹೋಗಿ ಎಂದು ಘೋಷಣೆ ಕೂಗಿದ್ದಾರೆ.