ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ  ನಡೆದಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಿಡಿಲು ಬಡಿದು ಮೃತಪಟ್ಟವರು.

ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.





























 
 

ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top