ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ,ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿಎಂ ಸಿದ್ದರಾಮಯ್ಯ ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದಾರೆ.


ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಕುಡಿಯುವ ನೀರಿಗೆ ತೊಂದರೆಯಾಗಿರುವ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು ಪುತ್ತೂರಿಗೆ 50 ಲಕ್ಷ ರೂ.ಮಂಜೂರು ಮಾಡಿದ್ದು ದ.ಕ. ಜಿಲ್ಲೆಯ ಉಳಿದ ತಾಲೂಕುಗಳಿಗೂ ತುರ್ತು ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.


ಕುಡಿಯುವ ನೀರಿನ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ,ಅಗತ್ಯ ಬಿದ್ದಲ್ಲಿ ಕೊಳವೆ ಬಾವಿ ತೆಗೆಯುವುದು ಸೇರಿದಂತೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆಯೋ ಅಲ್ಲೆಲ್ಲಾ ತುರ್ತಾಗಿ ವ್ಯವಸ್ಥೆ ಮಾಡಲಾಗುತ್ತದೆ. ಮಳೆ ಇಲ್ಲದ ಕಾರಣ ಮಾಮೂಲಿಯಂತೆ ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಆಗಿದ್ದು ಇಲ್ಲಿಯ ತನಕ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ನೀರಿನ ತೀರಾ ಅಭಾವ ಇದ್ದ ಕಡೆಗಳಲ್ಲಿ ನೀರಿಗಾಗಿ ತುರ್ತು ವ್ಯವಸ್ಥೆ ಕೈಗೊಳ್ಳುವಂತೆ ಈಗಾಗಲೇ ಸಂಬಂದಿಸಿದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top