ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್

ಬೆಂಗಳೂರು: ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದು ,ಇಂದು ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ ಆಗಲಿದೆ.

ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಸಿಬ್ಬಂದಿಗಳು ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಂದೆಡೆ ಮೂರು ತಿಂಗಳಿಂದ ಸಂಬಳವಿಲ್ಲ, ಮತ್ತೊಂದೆಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ (ಇಂದು) ರಾತ್ರಿಯಿಂದ ಆ್ಯಂಬುಲೆನ್ಸ್ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ. ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.





























 
 

ಇಂದು ರಾತ್ರಿ 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆ್ಯಂಬುಲೆನ್ಸ್ ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆ್ಯಂಬುಲೆನ್ಸ್ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top