ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ಸಾಧ್ಯತೆಯಿದೆ. ಎರಡನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿರುವುದರಿಂದ ಪರೀಕ್ಷಾ ಫಲಿತಾಂಶ ಪ್ರಕಟ ವಿಳಂಬವಾಗುತ್ತಿದೆ.
ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ. ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್ ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.