ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ.

ಬಳ್ಳಾರಿಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಯುವಕರ ತಂಡವೊಂದು ಇಂದು ಬೆಳಿಗ್ಗೆ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿತ್ತು. ಈ ವೇಳೆ ಯುವಕರ ತಂಡವು ರಕ್ಕಸ ಗಾತ್ರದ ಅಲೆಗೆ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಅಪಾಯವನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ಗೋಪಿನಾಥ್ (25) ಮತ್ತು ರಂಗನಾಥ್ (26) ಎಂಬ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ.

 ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top