ಉಡುಪಿ: ಸ್ವಚ್ಚಗೊಳಿಸಲು ಬಾವಿಗೆ ಇಳಿದಿದ್ದ ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ.
ದುರ್ಗೇಶ್ (34) ಮೃತಪಟ್ಟಿದ್ದು, ಅಡಿವೆಪ್ಪ ಕುರಿ (50) ಅವರನ್ನು ರಕ್ಷಣೆ ಮಾಡಲಾಗಿದೆ.
ಕೆಸರು ತೆಗೆದು ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವನ್ನಪ್ಪಿದ್ಯು ಮತ್ತೋರ್ವನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.
ಇಬ್ಬರು ಕೂಡ ಕೊಪ್ಪಳ ಜಿಲ್ಲೆಯವರಾಗಿದ್ದು, ಬ್ರಹ್ಮಾವರದ ಸಾಲಿಕೆರೆಯಲ್ಲಿ ವಾಸಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. 35 ಅಡಿ ಆಳದ ಬಾವಿಯಲ್ಲಿ ಕೆಸರು ಇದೆ ಎಂದು ಬಾವಿಯೊಳಗೆ ಬೀಚಿಂಗ್ ಪೌಡರ್ ಹಾಕಿ ಸ್ವಚ್ಛ ಮಾಡುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಆಮ್ಲಜನಕ ಕೊರತೆಯಾಗಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ.