ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ  46 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100ಫಲಿತಾಂಶ ದಾಖಲಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ, 13 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು  ತೃತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ.

ಫಾತಿಮತ್ ಅಫ್ರೀನ  519 ಅಂಕಗಳೊಂದಿಗೆ ಪ್ರಥಮ, ಪ್ರಾರ್ಥನ್ ಕೆ.  514 ಅಂಕಗಳೊಂದಿಗೆ ದ್ವಿತೀಯ ಹಾಗೂ ಫಾತಿಮತ್ ಶರೀಫ 513 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top