ಪುತ್ತೂರು: ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಗುತ್ತಿಗೆದಾರ ದಯಾನಂದ ಅವರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದ್ದಾರೆ.
ಈ ಕುರಿತು ಸ್ಥಳೀಯರು ಕಳೆದ ಕೆಲವು ದಿನಗಳ ಹಿಂದೆ ಬೇಡಿಕೆಯಿಟ್ಟಿದ್ದರು. ಈ ನಿಟ್ಟಿನಲ್ಲಿ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಶೆಟ್ಟಿ, ಮಾಜಿ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಎನ್., ಸೇವಾ ಸಹಕಾರಿ ನಿರ್ದೇಶಕ ರಾಜೇಶ್ ಮುಕ್ಕಾರಿ, ರಮೇಶ್ ಉಪಸ್ಥಿತರಿದ್ದರು