ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಂಡೆವಾದಕ, ಆಲಂಕಾರು ನಿವಾಸಿ ಆನಂದ ದೇವಾಡಿಗ (50) ಶುಕ್ರವಾರ ರಾತ್ರಿ ನಿಧನರಾದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ 28 ವರ್ಷಗಳಿಂದ ಚೆಂಡೆ ಸೇವಾ ವಾದಕರಾಗಿದ್ದ ಅವರು, ಆನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.
























