ಬೆಂಗಳೂರು: ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ 5 ದಿನ ಬಿರುಗಾಳಿ, ಗುಡುಗು ಸಮೇತ ಮಳೆ ಆಗಲಿದೆ. ಈ ವರೆಗೆ ಧಾರವಾಡದಲ್ಲಿ 8cm ಮಳೆ, ದಕ್ಷಿಣ ಕನ್ನಡದಲ್ಲಿ 6 cm ಮಳೆ, ಬೆಳಗಾವಿ, ಚಿಕ್ಕಮಗಳೂರು 5 cm ಮಳೆ ಆಗಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ ಕರ್ನಾಟಕ -ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆ ಸಾಧ್ಯತೆ ಇದೆ.