ಪುತ್ತೂರು : ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವಂತೆ ಬಿಜೆಪಿಯ ಚುನಾಯಿತ 25 ನಗರಸಭಾ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭಾ ನಿಕಟ ಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಗ್ರಾಮಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಗ್ರಾಮಾಂತರ ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಳಿಮನೆ, ನಿತೀಶ್ ಶಾಂತಿವನ, ಜಿಲ್ಲಾ ಎಸ್,ಟಿ.ಮೋರ್ಚ ಅಧ್ಯಕ್ಷ ಹರೀಶ್ ಬಿಜತ್ರೆ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳ ಪರವಾಗಿ ಯೋಜನಾ ನಿರ್ದೇಶಕರು ಮನವಿ ಸ್ವೀಕರಿಸಿದರು.
ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ನಗರಸಭಾ ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ
