ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ.

ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ.

ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ -7 ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ತಮ್ಮಲೋಕಸಭಾ ಕ್ಷೇತ್ರವಾದ ವಾರಣಾಸಿಯಿಂದ ನಾಮಪತ್ರ ಸಲ್ಲಿಸುವ ಮುನ್ನ ಇಂಡಿಯಾ ಟುಡೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ನನಗೆ ಈಗಾಗಲೇ (ಜಿ 7 ಗೆ) ಆಹ್ವಾನ ಬಂದಿದೆ. ನಾನು ಶೃಂಗಸಭೆಗೆ ತಯಾರಿ ನಡೆಸುತ್ತಿದ್ದೇನೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಅಲ್ಲಿಗೆ ಹೋಗುತ್ತೇನೆ ಎಂದಿದ್ದಾರೆ.































 
 

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಧಾನಿ ಮೋದಿ ಗಂಗಾನದಿಯ ದಶಾಶ್ವಮೇಧ ಘಾಟ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಮೋ ಘಾಟ್‌ಗೆ ಕ್ರೂಸ್ ಹತ್ತುವ ಮುನ್ನ ಸ್ನಾನ ಮಾಡಿದರು. ಇಂದು ಗಂಗಾ ಸಪ್ತಮಿಯ ಶುಭ ದಿನವಾಗಿದ್ದು, ಘಾಟ್‌ನಲ್ಲಿ ಗಂಗಾ ಆರತಿ ಮಾಡಿದರು. ಕಾಲ ಭೈರವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ವಾರಣಾಸಿ ಕ್ಷೇತ್ರ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ಮೋದಿಯವರ ಭದ್ರಕೋಟೆಯಾಗಿದೆ. ಅವರು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಎರಡು ಬಾರಿ ಗೆದ್ದಿದ್ದರು. ಮೋದಿ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ಅಜಯ್ ರೈ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಲೋಕಸಭೆಯಲ್ಲಿ ಅಜಯ್ ರೈ ಅವರು ಪ್ರಧಾನಿ ಮೋದಿ ಅವರನ್ನು ಎದುರಿಸುತ್ತಿರುವುದು ಇದು ಮೂರನೇ ಬಾರಿ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top