ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು !

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ.

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ(24) ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ.

ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top