ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಂಬ್ರ ಮಂಡಲ ಪಂಚಾಯತ್ ಸದಸ್ಯರಾಗಿ , ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇದರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ , ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾಗಿ , ಓಂ ಶಿವ ಭಜನಾ ಮಂದಿರ , ಓಂ ಶಿವ ಯುವಕ ಮಂಡಲದ ಗೌರವಾಧ್ಯಕ್ಷರಾಗಿ , ಊರಿನ ಅಭಿವೃದ್ಧಿಯಲ್ಲಿ ಯುವ ಸಮುದಾಯಕ್ಕೆ ಪ್ರೇರಣಾದಾಹಿಯಾಗಿ ಸೇವೆ ಸಲ್ಲಿಸಿದರು.

ಗಣ್ಯರ ಸಂತಾಪ :

ಮಾಜಿ ಶಾಸಕ ಸಂಜೀವ ಮಠಂದೂರು , ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ , ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಸೇರಿದಂತೆ ಹಲವಾರು ಮಂದಿ ಅಗಲಿದ ಆತ್ಮಕ್ಕೆ ಸಂತಾಪ ಸೂಚಿಸಿದರು.































 
 

ಮೃತರು ಪತ್ನಿ ಶ್ರೀಮತಿ ಇಂದಿರಾ, ಮಗ ಸಂದೀಪ್ ರೈ, ಸೊಸೆ ಮನೀಷಾ , ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top