ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದ್ದು ಇದೇ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top