ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಬಿಕಾಮ್ ಹಾಗೂ ಬಿಬಿಎ ವಿಭಾಗಗಳ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ವಿದ್ಯಾರ್ಥಿಗಳ ನಡವಳಿಕೆ ಒಂದು ಕಾಲೇಜಿನ ಮುಖವಾಣಿ ಇದ್ದಂತೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಬದ್ಧತೆ ಅಳವಡಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಉಪಪ್ರಾಂಶುಪಾಲ ಡಾ.ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ವಿದ್ಯೆ ವಿನಯವನ್ನು ಕೊಡುತ್ತ್ತದೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯ. ಗುರಿಯೆಡೆಗೆ ಸಾಗುವುದೇ ವಿದ್ಯಾರ್ಥಿ ಜೀವನದ ಮುಖ್ಯ ಉದ್ದೇಶ ಆಗಿರಬೇಕು. ಮುಖ್ಯ ಅತಿಥಿಯಾಗಿ ನಿವೃತ್ತ ಉಪಪ್ರಾಂಶುಪಾಲ ಡಾ.ಎ.ಪಿ. ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಕ್ತಿ ಸಾಮರ್ಥ್ಯವನ್ನು ಅರಿತುಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು ಮತ್ತು ಅಧ್ಯಾಪಕರಿಗೆ ಪ್ರೇರಕರಾಗುವಂತೆ ನಡೆದುಕೊಳ್ಳಬೇಕು ಎಂದರು.
ಹೃತಿಷ ಪ್ರಾರ್ಥಿಸಿದರು. ಡಾ. ರಾಧಾಕೃಷ್ಣ ಸ್ವಾಗತಿಸಿ, ಪ್ರೊ. ಪ್ರೇಮಲತಾ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ರೈ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಪುಷ್ಪಾ ಏನ್, ಧನ್ಯ ಫಿ.ಟಿ., ತನುಜಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.