ಬೆಳ್ತಂಗಡಿ: ಶನಿವಾರ ಮಧ್ಯರಾತ್ರಿ ವೇಳೆ ಅಕ್ರಮ ಕಲ್ಲಿನ ಕೋರೆಗೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರೊಬ್ಬರನ್ನು ಬಂಧಿಸಿದ ಘಟನೆ ಮೇಲಂತ ಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತಿದ್ದು, ದಾಳಿ ನೆಪದಲ್ಲಿ ಯಾರದೋ ಒತ್ತಡಕ್ಕೆ ಮಧ್ಯರಾತ್ರಿ ಮನೆಗೆ ನುಗ್ಗಿ ಬಂಧಿಸಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಬಿಡುಗಡೆಗೊಳಿಸುವವರೆಗೆ ಠಾಣೆಯ ಎದುರಿನಿಂದ ಕದಲುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸಹಿತ ಬೆಳ್ತಂಗಡಿಯ ನೂರಾರು ಬಿಜೆಪಿ ಕಾರ್ಯಕರ್ತರು ಠಾಣೆಯ ಎದುರು ಜಮಾಯಿಸಿದ್ದಾರೆ.