ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವವರಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ ಉಚಿತವಾಗಿ ನೀಡುವ ಪಡಿತರವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ. ಇದರ ಜೊತೆಗೆ ಕರ್ನಾಟಕದ ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿಗಳಿಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿಯ ಅಗತ್ಯವಿದೆ. ಆದರೆ ಕಳೆದ ಹಲವಾರು ಸಮಯಗಳಿಂದ ಹೊಸ ರೇಷನ್ ಕಾರ್ಡ್ ನೀಡುತ್ತಿಲ್ಲವಾದ್ದರಿಂದ ಹಲವಾರು ಕುಟುಂಬ ಸರಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಹೊಸ ಪಡಿತರ ಚೀಟಿ ನೀಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕರ್ನಾಟಕ ಪಡಿತರ ಚೀಟಿಗೆ ahara.kar.nic.in ನಲ್ಲಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿಗಾಗಿ ಜನರು ಈಗ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು PDF ರೂಪದಲ್ಲಿ ಸಂಪೂರ್ಣ ಅರ್ಜಿ ಪ್ರಕ್ರಿಯೆಯನ್ನು ಪರಿಶೀಲಿಸಬಹುದಾಗಿದೆ.
ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದ ಎಲ್ಲಾ ಜನರಿಗೆ ಪಡಿತರ ಚೀಟಿ ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ.
ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು :
ಆಧಾರ್ ಕಾರ್ಡ್, ವೋಟರ್ ಐಡಿ, ವಯಸ್ಸಿನ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್, ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ,, ಮೊಬೈಲ್ ಸಂಖ್ಯೆ, ಸ್ವಯಂ ಘೋಷಿತ ಪ್ರಮಾಣ ಪತ್ರ ಇವಿಷ್ಟು ದಾಖಲೆಗಳಿದ್ದರೆ ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.