ಬಂಟ್ವಾಳ: ಆ್ಯಕ್ಟೀವಾಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಅವಿವಾಹಿತರಾಗಿದ್ದು, ತನ್ನ ತಾಯಿ ಜೊತೆ ವಾಸವಾಗಿದ್ದಾರೆ. ಮೃತರು ತಾಯಿ, ಐವರು ಸಹೋದರರನ್ನು ಅಗಲಿದ್ದಾರೆ.