ಪುತ್ತೂರು: ಪ್ರಗತಿ ಎಜುಕೇಶನಲ್ ಫೌಂಡೇಶನ್ ಅಧೀನದಲ್ಲಿ ಪುತ್ತೂರಿನ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಕಳೆದ 17 ವರ್ಷಗಳಿಂದ ಶಾಲಾ-ಕಾಲೇಜು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಎಸ್ ಎಸ್ ಎಲ್ ಸಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ಫೇಲ್ ಆಗಿರುವ ವಿಷಯವನ್ನು ಪಾಸ್ ಮಾಡಿಕೊಳ್ಳಲು ಉತ್ತಮ ವಾತಾವರಣವನ್ನು ಕಲ್ಪಿಸಿಕೊಟ್ಟಿದೆ.
ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಮಾರ್ಚ್ 2025 ಕ್ಕೆ 15 ಅಥವಾ 17 ವರ್ಷ ಭರ್ತಿಯಾಗುವ ವಿದ್ಯಾರ್ಥಿಗಳು ಹಾಗೂ ಪ್ರಥಮ ಪಿಯುಸಿ ಅನುತ್ತೀರ್ಣಗೊಂಡವರು ಖಾಸಗಿಯಾಗಿ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ದಾಖಲಾತಿ ಆರಂಭಗೊಂಡಿದೆ. ಎಸ್ ಎಸ್ ಎಲ್ ಸಿ ಯಲ್ಲಿ ಖಾಸಗಿಯಾಗಿ ನೋಂದಾಯಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಮಾರ್ಚ್ 2025 ಕ್ಕೆ 15 ವರ್ಷ ಭರ್ತಿಗೊಂಡಿರಬೇಕು. ಅಂತಹ ವಿದ್ಯಾರ್ಥಿಗಳಿಗೆ ದಾಖಲಾತಿ ಆರಂಭಗೊಂಡಿದೆ.
ಕಲಿಕೆಯಲ್ಲಿ ಹಿಂದುಳಿದು ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕೆಂಬ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ನೀಡುತ್ತಾ ಬಂದಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಎಂಬ ಶಿರೋನಾಮೆಯಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಅನುಭವಿ ನುರಿತ ಶಿಕ್ಷಕಿಯರಿಂದ ತರಬೇತಿ, ಒಂದು ವರ್ಷದ ಉಚಿತ ಕಂಪ್ಯೂಟರ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳು ನಡೆಯಲಿವೆ.
ಟ್ಯೂಷನ್ ತರಗತಿಗಳು:
ಒಂದರಿಂದ ಪದವಿ ತರಗತಿಯವರೆಗೆ ಟ್ಯೂಷನ್ ತರಗತಿಗಳು, ನವೋದಯ ಪರೀಕ್ಷೆ ತಯಾರಿ, ಎನ್ ಟಿ ಎಸ್ ಇ/ಎನ್ ಎಂಎಂಎಸ್, ದಕ್ಷಿಣ ಕನ್ನಡದ ನುರಿತ ಉಪನ್ಯಾಸಕ ವೃಂದದವರಿಂದ ಸಿ.ಇ.ಟಿ/ ನೀಟ್/ ಜೆಇಇ ತರಗತಿಗಳು ಅಲ್ಲದೇ ವಿವಿಧ ಇಲಾಖೆಯಲ್ಲಿ ಜರಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುವುದು.
2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದೈನಂದಿನ ತರಗತಿಗಳು ಜೂ.3 ರಿಂದ ಪ್ರಾರಂಭಗೊಳ್ಳಲಿದ್ದು ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳು ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಟೇಬಲ್ ಟ್ಯೂಷನ್ ತರಗತಿಯನ್ನು ನೀಡಲಾಗುವುದು. ತರಗತಿಗಳು ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಹಾಗೂ ಭಾನುವಾರ ಬೆಳಗ್ಗೆ 9.30 ರಿಂದ ಸಂಜೆ 3.00 ಗಂಟೆಯ ವರೆಗೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು/ ಪೋಷಕರು ತಮ್ಮ ಮಕ್ಕಳಿಗೆ ತರಬೇತಿ/ ಟ್ಯೂಷನ್ ತರಬೇತಿ ಬೇಕಾದಲ್ಲಿ ಮುಖತಃ ಬಂದು ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಕಛೇರಿಯ ಸಮಯ ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ತನಕ. ದೂರವಾಣಿ ಸಂಖ್ಯೆ: 9900109490, 9480106274, 8123899490, ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲೆ ಕೆ ಹೇಮಲತಾ ಗೋಕುಲ್‌ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.