ನೆಲ್ಯಾಡಿ : ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು, ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ತಾಯಿ ಸಪೀಯಾ, ಮಗ ಸಫೀಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಕಾರು ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.